ಆಸ್ಸಾಂನಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ: ಸಿಎಂ ಆಗಿ ಸೋನೋವಾಲ್

ಮಂಗಳವಾರ, 24 ಮೇ 2016 (16:41 IST)
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಜಯಭೇರಿಯೊಂದಿಗೆ ಬಹುಮತಗಳಿಸಿ ಬಿಜೆಪಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸರ್ಬಾನಂದ್ ಸೋನೋವಾಲ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 
 
ಮುಖ್ಯಮಂತ್ರಿಯಾಗಿ ಸರ್ಬಾನಂದ್ ಸೋನೋವಾಲ್ ಪ್ರಮಾಣ ವಚನ ಸ್ವೀಕರಿಸಿದ್ದು ಆಸ್ಸಾಂ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಿದೆ.
 
ಗುವಾಹಟಿಯ ಖಾನಾಪೂರಾ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ಮೋದಿ ಸೇರಿದಂತೆ ಇತರ ಗಣ್ಯರ ಸಮ್ಮುಖದಲ್ಲಿ ಸೋನೋವಾಲ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
 
ಸಂಪೂರ್ಣ ಗುವಾಹಟಿ ನಗರವನ್ನು ಕೇಸರಿ ಬಣ್ಣದ ತಳಿರು ತೋರಣಗಳಿಂದ ಅಲಂಕರಿಸಿದ್ದಲ್ಲದೇ ಭಾರಿ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಸೇರಿದಂತೆ 10 ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಯೋಗಾ ಗುರು ಬಾಬಾ ರಾಮದೇವ್ ಮತ್ತು ಶ್ರೀ ಶ್ರೀ ರವಿಶಂಕರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
 
ಬಿಜೆಪಿ ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸೋನೋವಾಲ್ ಅವರೊಂದಿಗೆ ಇಬ್ಬರು ಎಜಿಪಿ ಮತ್ತು ಬಿಪಿಎಫ್‌ ಪಕ್ಷಕ್ಕೆ ಸೇರಿದ ಶಾಸಕರು ಮತ್ತಚು ಬಿಜೆಪಿಯ ಐವರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ತಿಳಿಸಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ