ಶೀಘ್ರದಲ್ಲಿ 10ನೇ ತರಗತಿವರೆಗೆ ಉಚಿತ ಶಿಕ್ಷಣ

ಬುಧವಾರ, 29 ಜೂನ್ 2016 (10:49 IST)
ಸಂಪೂರ್ಣ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಯೋಚನೆ ಮಾಡುತ್ತಿದೆ. ದೇಶದಲ್ಲಿ ಪೂರ್ವ ಶಾಲಾ ಮತ್ತು ಪ್ರೌಢ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಯೋಜನೆಯ ಭಾಗವಾಗಿ ಮಾನವ ಸಂಪನ್ಮೂಲ ಇಲಾಖೆ ನಿರ್ಧಾರಕ್ಕೆ ಬಂದಿದೆ. 

 
ಪ್ರತಿಯೊಬ್ಬರು ಕನಿಷ್ಠ 10ನೇ ತರಗತಿಯವರೆಗೆ ಓದಬೇಕೆನ್ನುವುದು ಈ ಯೋಜನೆಯ ಉದ್ದೇಶವಾಗಿದೆ. 
 
ರಾಷ್ಟ್ರೀಯ ಸುದ್ದಿ ಪತ್ರಿಕೆಯಲ್ಲಿ ಬಂದಿರುವ ವರದಿಯ ಪ್ರಕಾರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಲ್ಲಿ 9 ಮತ್ತು 10ನೇ ತರಗತಿ ಶಿಕ್ಷಣದ ಮೌಲ್ಯಮಾಪನಕ್ಕಾಗಿ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಕಾರ್ಯದರ್ಶಿ ಡಾಕ್ಟರ್ ಎಸ್.ಸಿ ಖುಂಟಿಯಾ ತಿಳಿಸಿದ್ದಾರೆ. 
 
ಇಲ್ಲಿಯವರೆಗೆ,  ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಅಡಿಯಲ್ಲಿ 8ನೇ ವರ್ಗದವರೆಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿತ್ತು.
 
ಸಾರ್ವತ್ರಿಕ ಶಿಕ್ಷಣವನ್ನು ಸಾಧಿಸಲು ಮಾಡಬೇಕಾಗಿರುವುದು ಬಹಳಷ್ಟಿದೆ. ದೇಶದಲ್ಲಿ ಸುಮಾರು 37%ರಷ್ಟು ಮಕ್ಕಳು ಒಂದು ಪ್ರಾಥಮಿಕ ಶಾಲೆಯಲ್ಲಿಯೇ ಶಿಕ್ಷಣವನ್ನು ಮೊಟಕುಗೊಳಿಸುತ್ತಾರೆ ಎಂದು ಯುನಿಸೆಫ್ ತನ್ನ ವರದಿಯಲ್ಲಿ ಹೇಳಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ