ಅಪ್ರಾಪ್ತರು ವಾಹನ ಚಲಾಯಿಸಿದಲ್ಲಿ ಪೋಷಕರಿಗೆ ದಂಡ

ಗುರುವಾರ, 21 ಏಪ್ರಿಲ್ 2016 (14:19 IST)
ನವದೆಹಲಿ: ಅಪ್ರಾಪ್ತ ವಯಸ್ಸಿನವರು ರಸ್ತೆ ಅಪಘಾತ ಪ್ರಕರಣಗಳಲ್ಲಿ ಭಾಗಿಯಾದ್ದರೆ, ಅವರ ಪೋಷಕರ ವಿರುದ್ಧ ಪ್ರಕರಣ ದಾಖಲು ಮಾಡುವಂತೆ, ಸರಕಾರ ಶೀಘ್ರದಲ್ಲಿ ಕಾನೂನು ರೂಪಿಸಲಿದೆ ಎಂದು ಮೂಲಗಳು ತಿಳಿಸಿವೆ.   
ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಾಲನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟರೆ, ಅಂತಹ ಪೋಷಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರಕಾರ, ಮೋಟರ್ ವಾಹನ ಕಾಯ್ದೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. 
 
ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಅಪ್ರಾಪ್ತ ವಯಸ್ಕರು ವಾಹನ ಚಾಲನೆಯಲ್ಲಿ ತೊಡಗಿದ್ದರೆ, ಪೋಷಕರು ಉದ್ದೇಶಪೂರ್ವಕವಾಗಿ ತಮ್ಮ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ವಾಹನ ಚಾಲನೆಯಲ್ಲಿ ತೊಡಗಿಸಿದ್ದಾರೆ ಎಂದು ಭಾವಿಸಲಾಗುತ್ತಿದ್ದು, ಅವರ ವಿರುದ್ಧ ಅಧಿಕೃತವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದೆ.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ