ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಮ್ಮ ಟ್ವಿಟ್ಟರ್ ಪ್ರೊಫೈಲ್ ಫೋಟೋವನ್ನು ಬದಲಾಯಿಸಿದ್ದಾರೆ.
ಹೌದು, ಎಂ.ಕೆ ಸ್ಟಾಲಿನ್ ಅವರು, ಭಾರತದ ತ್ರಿವರ್ಣ ಧ್ವಜದೊಂದಿಗೆ ಎಂ.ಕರುಣಾನಿಧಿ ಅವರು ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಮೂಲಕ ಧ್ವಜಾರೋಹಣ ಹಕ್ಕನ್ನು ಸಿಎಂಗಳು ಹೊಂದಿರುತ್ತಾರೆ ಎಂಬುವುದನ್ನು ತೋರಿಸಿ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತ್ರಿವರ್ಣ ಧ್ವಜದ ಫೋಟೋವನ್ನು ಹಂಚಿಕೊಂಡ ಕೆಲವೇ ದಿನಗಳಲ್ಲಿ ಆಡಳಿತಾರೂಢ ಡಿಎಂಕೆ ಅಧ್ಯಕ್ಷರಾಗಿರುವ ಸ್ಟಾಲಿನ್ ಅವರು, ಎಲ್ಲರೂ ಸೇರಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗುರುತಿಸಿ, ಎಲ್ಲರೂ ಒಟ್ಟಾಗಿ ಆಚರಿಸೋಣ ಎಂದು ಜನರಿಗೆ ತಿಳಿಸಿದ್ದಾರೆ.
1974ರ ಆಗಸ್ಟ್ 15ರಂದು ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ರಾಜ್ಯದ ಮುಖ್ಯಮಂತ್ರಿಗಳ ಹಕ್ಕನ್ನು ಮುತಮಿಳ್ ಅರಿಗ್ನರ್ (ತಮಿಳು ವಿದ್ವಾಂಸ) ಕಲೈಂಜರ್ ಅವರು ಖಚಿತಪಡಿಸಿದರು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.