25 ರಿಂದ ಮೋದಿ ಕನಸಿನ `ಸ್ವಚ್ಛ ಭಾರತ' ಆಂದೋಲನಕ್ಕೆ ಚಾಲನೆ

ಮಂಗಳವಾರ, 23 ಸೆಪ್ಟಂಬರ್ 2014 (11:06 IST)
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಸ್ವಚ್ಛ ಭಾರತ ಆಂದೋಲನ ಅಭಿಯಾನ ಬರುವ ಸೆಪ್ಟಂಬರ್ 25 ಗುರುವಾರದಿಂದ ಆರಂಭಗೊಳ್ಳಲಿದೆ.

2019ರ ವೇಳೆಗೆ ದೇಶವನ್ನು ನಿರ್ಮಲ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಎಲ್ಲ ರಾಜ್ಯಗಳು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕೇಂದ್ರ ಸರಕಾರ ಸೂಚಿಸಿದೆ. ಈ ಕುರಿತು ಕೇಂದ್ರ ಸಚಿವ ಸಂಪುಟದ ಕಾರ್ಯದರ್ಶಿ ಅಜಿತ್ ಸೇಥ್, ಎಲ್ಲ ರಾಜ್ಯ ಸರಕಾರಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.
 
ಯೋಜನೆ ಯಶಸ್ವಿಯಾಗಬೇಕಾದರೆ ಶುಚಿತ್ವ ಕಾರ್ಯದಲ್ಲಿ ಪ್ರತಿಯೊಬ್ಬ ಸಾರ್ವಜನಿಕ ತನ್ನನ್ನು ತಾನು ತೊಡಗಿಕೊಳ್ಳಬೇಕು. ಸಮಾಜದ ಎಲ್ಲ ವರ್ಗದ ಜನರ ಸಹಕಾರ, ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ. ಈ ಹಿನ್ನೆಲೆಯಲ್ಲಿ ಮನೆಗಳು, ಸರಕಾರಿ ಕಚೇರಿಗಳು, ಮಾರುಕಟ್ಟೆ ಪ್ರದೇಶಗಳು ಹಾಗೂ ಇನ್ನಿತರ ಪ್ರದೇಶಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ. ಅಲ್ಲದೆ, ಸರಕಾರಿ ಸಂಘಟನೆಗಳು ಹಾಗೂ ಸರಕಾರೇತರ ಸಂಘ-ಸಂಸ್ಥೆಗಳು, ಸರಕಾರಿ ಅಧಿಕಾರಿಗಳ ಸಹಾಯ ಸಹಕಾರದಿಂದ ಜನಾಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. 

ವೆಬ್ದುನಿಯಾವನ್ನು ಓದಿ