ಜೆನೆರಿಕ್ ಔಷಧಗಳನ್ನೇ ಶಿಫಾರಸು ಮಾಡಬೇಕೆಂಬ NMC ಆದೇಶಕ್ಕೆ ತಡೆ

ಶುಕ್ರವಾರ, 25 ಆಗಸ್ಟ್ 2023 (08:46 IST)
ನವದೆಹಲಿ : ಜೆನೆರಿಕ್ ಔಷಧಗಳ ಹೊರತಾಗಿ ಬೇರೆ ಔಷಧಗಳನ್ನು ವೈದ್ಯರು ಶಿಫಾರಸು ಮಾಡದಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಹೊರಡಿಸಿದ್ದ ಆದೇಶವನ್ನ ತಡೆಹಿಡಿಯಲಾಗಿದೆ.

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮತ್ತು ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನ ಸಂಪರ್ಕಿಸಿದ ನಂತರ ಈ ಬೆಳಗಣಿಗೆ ಕಂಡುಬಂದಿದೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ ನೋಂದಾಯಿತ ವೈದ್ಯಕೀಯ ಪ್ರಾಕ್ಟೀಷನರ್ (ವೃತ್ತಿಪರ ನಡವಳಿಕೆ) ನಿಯಮಗಳು, 2023, ಇತರ ನಿರ್ದೇಶನಗಳೊಂದಿಗೆ ವೈದ್ಯರಿಗೆ ಜೆನೆರಿಕ್ ಔಷಧಿಗಳ ಪ್ರಿಸ್ಕ್ರಿಪ್ಷನ್ ಅನ್ನು ಕಡ್ಡಾಯಗೊಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ