ಮಲಮಗಳ ಮೇಲೆ ಅತ್ಯಾಚಾರ !

ಸೋಮವಾರ, 23 ಜನವರಿ 2023 (14:43 IST)
ತಿರುವನಂತಪುರಂ : ತನ್ನ 15 ವರ್ಷದ ಮಲಮಗಳ ಮೇಲೆ ಅತ್ಯಾಚಾರ ಮಾಡಿದ್ದ ವ್ಯಕ್ತಿಯೊಬ್ಬನಿಗೆ ಕೇರಳದ ನ್ಯಾಯಾಲಯವೊಂದು 40 ಜೈಲು ಶಿಕ್ಷೆ ವಿಧಿಸಿದೆ.

ಇಡುಕ್ಕಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶ ಟಿ.ಜಿ ವರ್ಗೀಸ್ 2017ರಲ್ಲಿ ನಡೆದ ಘಟನೆಗೆ ಸಂಬಂಧಿಸಿ ತೀರ್ಪು ನೀಡಿದ್ದಾರೆ. ಪೋಕ್ಸೊ ಕಾಯ್ದೆಯಡಿಯಲ್ಲಿ ಅಪರಾಧಿಗೆ 40 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

41 ವರ್ಷದ ವ್ಯಕ್ತಿಯು ತನ್ನ ಮಲಮಗಳ ಮೇಲೆ ಅತ್ಯಾಚಾರವೆಸಗಿದ್ದ. ಇದರಿಂದ ಆಕೆ ಗರ್ಭವತಿಯಾಗಿದ್ದಳು. ಆದರೆ ಆತ ಆಕೆ ಬಳಿ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಹಾಗೂ ಆಕೆಯ ತಾಯಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಬಂದಿದ್ದು, ವೈಜ್ಞಾನಿಕ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಅಪರಾಧಿಗೆ 1 ಲಕ್ಷ ರೂ. ದಂಡ ವಿಧಿಸಿದೆ ಮತ್ತು ಸಂತ್ರಸ್ತೆಯ ಪುನರ್ವಸತಿಗಾಗಿ 50,000 ರೂ. ಪಾವತಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ