ಉತ್ತರಪ್ರದೇಶ ವಿಧಾನಸಭೆ ಚುನಾವಣೆಯ ಆರನೇ ಹಂತದ ಪ್ರಚಾರ ಕಣ ರಂಗೇರಿದೆ. ಇಂದು ನಡೆದ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ವರದಿಯಾಗಿದೆ.
ರಾಹುಲ್ ಗಾಂಧಿ ಮತ್ತು ಅಖಿಲೇಶ್ ರೋಡ್ ಶೋ ಸಂದರ್ಭದಲ್ಲಿ ವಾಹನ ತೆರಳುತ್ತಿದ್ದಾಗ, ಸಮಾಜವಾದಿ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರು ಮುಖಾಮುಖಿಯಾದಾಗ ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರಿ ಸಂಖ್ಯೆಯಲ್ಲಿ ನಿಯೋಜನೆಗೊಂಡಿದ್ದ ಪೊಲೀಸ್ ಪಡೆಗಳು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಂದು ಬೆಳಿಗ್ಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರೋಡ್ ಶೋ ನಡೆಸಿದ್ದರು. ನಂತರ ರಾಹುಲ್- ಅಖಿಲೇಶ್ ಹಾಗೂ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿಯವರ ರೋಡ್ ಶೋ ಕಾರ್ಯಕ್ರಮಗಳಿದ್ದರಿಂದ ಭಾರಿ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.