ಅಯೋಧ್ಯಾ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ...?

ಗುರುವಾರ, 6 ಜುಲೈ 2017 (10:54 IST)
ಅಯೋಧ್ಯಾ:ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಲ್ಲುಗಳ ಸಂಗ್ರಹ ಕಾರ್ಯ ಆರಂಭವಾಗಿದ್ದು, ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ಐದು ಟ್ರಕ್ ಗಳಲ್ಲಿ ಕಲ್ಲುಗಳನ್ನು ತರಿಸಲಾಗಿದೆ.
 
ವಿಶ್ವ ಹಿಂದೂ ಪರಿಷತ್ ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ಅಯೋಧ್ಯೆಯಲ್ಲಿ ಕೆಂಪು ಕಲ್ಲುಗಳನ್ನು ಸಂಗ್ರಹ ಮಾಡುತ್ತಿದೆ. ಈ ಹಿಂದೆ ಕೂಡ ಕಲ್ಲುಗಳನ್ನು ತರಲಾಗಿತ್ತು. ಇದೀಗ ಮತ್ತೆ ಟ್ರಕ್ ಗಳಲ್ಲಿ ಕಲ್ಲುಗಳನ್ನು ತರಲಾಗಿದೆ. ಉತ್ತರ ಪ್ರದೇಶದಲ್ಲಿ ಈ ಹಿಂದಿನ ಅಖಿಲೇಶ್ ಯಾದವ್ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಕಲ್ಲುಗಳನ್ನು ತರುವುದಕ್ಕೆ ನಿಷೇಧ ಹೇರಲಾಗಿತ್ತು ಎಂದು ವಿಹೆಚ್ ಪಿ ಪ್ರತಿನಿಧಿ ಪ್ರಕಾಶ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.
 
ಈ ಗಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಲ್ಲು ಸಂಗ್ರಹಕ್ಕೆ ನಿರ್ಬಂಧ ವಿಧಿಸಿಲ್ಲ. ಈ ನಿಟ್ಟಿನಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ಬೃಹತ್ ಕೆಂಪು ಕಲ್ಲುಗಳನ್ನು ತಮ್ದು ಸಂಗ್ರಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
 

ವೆಬ್ದುನಿಯಾವನ್ನು ಓದಿ