ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೀದಿ ನಾಯಿಗಳಿಂದ ಆಗುತ್ತಿರುವ ತೊಂದರೆ ಮನಗಂಡು ಮೊನ್ನೆಯಷ್ಟೇ ಸುಪ್ರೀಂಕೋರ್ಟ್ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯ ಕೇಂದ್ರಕ್ಕೆ ಸಾಗಿಸಲು ಸೂಚನೆ ನೀಡಿತ್ತು. ಆದರೆ ಇದು ವಿವಾದಕ್ಕೆ ಕಾರಣವಾಗಿತ್ತು. ಹಲವರು ಸುಪ್ರೀಂಕೋರ್ಟ್ ತೀರ್ಮಾನದ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಧ್ವನಿಯೆತ್ತಿದ್ದರು.
ಇದರ ಬೆನ್ನಲ್ಲೇ ಈಗ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ಮೂವರು ನ್ಯಾಯಮೂರ್ತಿಗಳಿಂದ ವಿಚಾರಣೆ ನಡೆಸಲಿದೆ. ಬೀದಿ ನಾಯಿಗಳ ತೀರ್ಪಿನ ಬಗ್ಗೆ ಆಕ್ಷೇಪ ಬಂದಿದ್ದರಿಂದ ಮುಖ್ಯನ್ಯಾಯಮೂರ್ತಿ ಬಿಆರ್ ಗವಾಯಿ ಅವರು ತೀರ್ಪಿನ ಬಗ್ಗೆ ಮರುಪರಿಶೀಲನೆ ನಡೆಸುವುದಾಗಿ ಹೇಳಿದ್ದರು. ಅದರಂತೆ ಇಂದು ಮೂವರು ನ್ಯಾಯಮೂರ್ತಿಗಳಿಂದ ವಿಚಾರಣೆ ನಡೆಯಲಿದೆ. ಈ ಮೂಲಕ ಬೀದಿ ನಾಯಿಗಳ ಪಾಡೇನು ಎನ್ನುವುದು ಇಂದು ಸುಪ್ರೀಂಕೋರ್ಟ್ ನಲ್ಲಿ ತೀರ್ಮಾನವಾಗಲಿದೆ. ಈ ತೀರ್ಪು ಬೆಂಗಳೂರು ಸೇರಿದಂತೆ ಬೀದಿ ನಾಯಿಗಳಿಂದ ತೊಂದರೆ ಅನುಭವಿಸುತ್ತಿರುವ ವಿವಿಧ ನಗರಗಳ ದೃಷ್ಟಿಯಿಂದ ಮಹತ್ವದ್ದಾಗಲಿದೆ.