ತರಗತಿಯಲ್ಲಿ ಬಟ್ಟೆ ಬಿಚ್ಚಿಸಿದ ಟೀಚರ್: ವಿದ್ಯಾರ್ಥಿನಿ ಆತ್ಮಹತ್ಯೆ

ಭಾನುವಾರ, 16 ಅಕ್ಟೋಬರ್ 2022 (08:40 IST)
ರಾಂಚಿ: ತರಗತಿಯಲ್ಲಿ ಟೀಚರ್ ಬಟ್ಟೆ ಬಿಚ್ಚಿಸಿ ಪರಿಶೀಲನೆ ನಡೆಸಿದ್ದರಿಂದ ಅವಮಾನಿತಳಾದ 9 ನೇ ತರಗತಿ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ತರಗತಿಯಲ್ಲಿ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ವಿದ್ಯಾರ್ಥಿನಿ ಕಾಪಿ ಹೊಡೆಯುತ್ತಿದ್ದಾಳೆಂದು ಅನುಮಾನಗೊಂಡ ಟೀಚರ್ ಆಕೆಯ ಬಟ್ಟೆ ಬಿಚ್ಚಿಸಿ ಪರಿಶೀಲನೆ ನಡೆಸಿದ್ದರು.

ಇದರಿಂದ ಮನೊಂದ ವಿದ್ಯಾರ್ಥಿನಿ ಮನೆಗೆ ಬಂದ ಬಳಿಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಟೀಚರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.

-Edited by Rajesh Patil

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ