ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಭಾನುವಾರ, 26 ಡಿಸೆಂಬರ್ 2021 (11:01 IST)
ಚೆನ್ನೈ : ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ತಮಿಳುನಾಡಿನ ಕೊಯಮತ್ತೂರು ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ.
 
ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಂಪ್ಯೂಟರ್ ಸೈನ್ಸ್ ಬೋಧಿಸುತ್ತಿದ್ದ ಆರೋಪಿಯ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಶಾಲೆಯ 11 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಶಿಕ್ಷಕ ಆನ್ಲೈನ್ ಹಾಗೂ ಆಫ್ಲೈನ್ ತರಗತಿಗಳಲ್ಲಿ ಅಶ್ಲೀಲ ಟೀಕೆ ಹಾಗೂ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾರೆ. 

ಗುರುವಾರ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಿಗೆ ಈ ಬಗ್ಗೆ ದೂರನ್ನು ನೀಡಿದ್ದು, ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಶಾಲೆಯ ಮುಂಭಾಗದ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುವುದಾಗಿಯೂ ಹೇಳಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ