ಹುಟ್ಟು ಹಬ್ಬದ ಆಚರಣೆಯ ವೇಳೆ ನಡೆದಿದೆ ಇಂತಹ ಘೋರ ಕೃತ್ಯ

ಭಾನುವಾರ, 14 ಮಾರ್ಚ್ 2021 (07:31 IST)
ನವದೆಹಲಿ : ಹುಟ್ಟು ಹಬ್ಬದ ಸಂಭ್ರಮಾಚರಣೆಯ ವೇಳೆ ವ್ಯಕ್ತಿಯೊಬ್ಬ ಇನ್ನೊಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಘಟನೆ ನವದೆಹಲಿಯಲ್ಲಿ ನಡೆದಿದೆ.

ತೋಟದ ಮನೆಯಲ್ಲಿ ನಡೆದ ಸಂತ್ರಸ್ತನ ಕಿರಿಯ ಸಹೋದರನ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಡಿಜಿ ಹಾಡುಗಳನ್ನು ನುಡಿಸುವ ವಿಚಾರದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಆಗ ಮದ್ಯದ ಅಮಲಿನಲ್ಲಿದ್ದ ಆರೋಪಿ ಇನ್ನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ಪೊಲೀಸರು ಆರೋಪಿಯನ್ನು ಹುಡುಕಿ ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ