ಸುನಂದಾ ಪುಷ್ಕರ್ ಸಾವು ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಬೇಲ್ ಸಿಗುತ್ತಾ?
ಗುರುವಾರ, 5 ಜುಲೈ 2018 (09:17 IST)
ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಅನುಮಾಸ್ಪದ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಇಂದು ಹೊರಬೀಳಲಿದೆ.
ಶಶಿ ತರೂರ್ ರನ್ನು ಆರೋಪಿಗಳಲ್ಲೊಬ್ಬರೆಂದು ಕೆಲವು ದಿನಗಳ ಹಿಂದೆ ದೆಹಲಿ ಕೋರ್ಟ್ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಿತ್ತು. ಇದಾದ ಬಳಿಕ ಕಾಂಗ್ರೆಸ್ ನಾಯಕ ದೆಹಲಿ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ನಿನ್ನೆ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದಿರಿಸಿದೆ. ಕೋರ್ಟ್ ಆರೋಪ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸಿದಾಗಿನಿಂದಲೂ ತರೂರ್ ತನಗೂ ಈ ಸಾವಿಗೂ ಸಂಬಂಧವಿಲ್ಲ ಎಂದೇ ಹೇಳುತ್ತಾ ಬಂದಿದ್ದಾರೆ.
ಆದರೆ ದೆಹಲಿ ಪೊಲೀಸರು ತರೂರ್ ಅವರಿಗೆ ಜಾಮೀನು ನೀಡಬಾರದೆಂದು ವಿರೋಧಿಸುತ್ತಿದ್ದಾರೆ. ಪ್ರಭಾವಿ ನಾಯಕರಾಗಿರುವ ತರೂರ್ ವಿದೇಶಕ್ಕೆ ಪಲಾಯನ ಮಾಡಬಹುದು ಎಂದು ದೆಹಲಿ ಪೊಲೀಸರು ವಾದಿಸುತ್ತಿದ್ದಾರೆ. ಯಾವುದಕ್ಕೂ ಇಂದು ಯಾರ ಪರವಾಗಿ ತೀರ್ಪು ಬರಬಹುದೆಂದು ಕಾದು ನೋಡಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.