ನವದೆಹಲಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕರ್ನಾಟಕದ ಬೆಳವಣಿಗೆಗೆ ಪೂರಕವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಈ ದಶಪಥ ಹೆದ್ದಾರಿ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುವ ಪ್ರಮುಖ ಸಂಪರ್ಕ ಯೋಜನೆಯಾಗಿದೆ ಎಂದು ಬಣ್ಣಿಸಿದ್ದಾರೆ.
“ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯು ನಾಲ್ಕು ರೈಲು ಮೇಲ್ಸೇತುವೆಗಳು, ಒಂಭತ್ತು ಸೇತುವೆಗಳು, 40 ಸಣ್ಣ ಸೇತುವೆಗಳು, 89 ಅಂಡರ್ಪಾಸ್ಗಳು ಮತ್ತು ಮೇಲ್ಸೇತುವೆಗಳ ಅಭಿವೃದ್ಧಿಯನ್ನು ಒಳಗೊಂಡಿರುತ್ತದೆ” ಎಂದು ಗಡ್ಕರಿ ಟ್ವೀಟ್ ಮಾಡಿ ತಿಳಿಸಿದ್ದರು. ಇದನ್ನು ಪ್ರಧಾನಿ ಮೋದಿ ರೀಟ್ವೀಟ್ ಮಾಡಿದ್ದಾರೆ.