ಇಂದು ನಡೆಯಬೇಕಿದ್ದ ವಿಚಾರಣೆಯನ್ನು ಕಾಂಗ್ರೆಸ್ ಪರ ವಕೀಲರ ಮನವಿ ಮೇರೆಗೆ ಅ.23ಕ್ಕೆ ಮುಂದೂಡಲಾಗಿತ್ತು. ಆದರೆ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಈ ಕೇಸ್ ನ್ನು ಬೇಗ ಇತ್ಯರ್ಥ ಮಾಡಿಕೊಡಬೇಕೆಂದು ಕೇಳಿಕೊಂಡ ಹಿನ್ನಲೆಯಲ್ಲಿ ಇಂದೇ ವಿಚಾರಣೆ ನಡೆಸಲಾಗುವುದು ಎನ್ನಲಾಗಿತ್ತು.
ಆದರೆ ಇದೀಗ ಮತ್ತೆ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ನಾಳೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಇದರಿಂದ ಇಂದೇ ತೀರ್ಪು ಬರುವ ನಿರೀಕ್ಷೆಯಲ್ಲಿದ್ದ ಅನರ್ಹ ಶಾಸಕರ ಆಸೆಗೆ ಮತ್ತೆ ತಣ್ಣೀರೆಚಿದಂತಾಗಿದೆ .