ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ತಾಕೀತು
ವಿಧಾನಸಭೆಯಲ್ಲಿ ಪಾಸಾಗಿರುವ ಹಾಗೂ ಮರು ಅಂಗೀಕಾರವಾಗಿರುವ ಮಸೂದೆಗಳನ್ನು ಯಾವುದೇ ರಾಜ್ಯದ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸುವಂತಿಲ್ಲ.
ಇದೇ ವೇಳೆ, 10 ಮರು ಅಂಗೀಕೃತ ವಿಧೇಯಕಗಳನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದ್ದ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರಿಗೆ ಚಾಟಿ ಬೀಸಿರುವ ಸರ್ವೋಚ್ಚ ನ್ಯಾಯಾಲಯ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಜತೆ ಕೂತು ವಿವಾದ ಬಗೆಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಸ್ಪಷ್ಟವಾಗಿ ತಾಕೀತು ಮಾಡಿದೆ.