ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು
ದಯಾಮರಣಕ್ಕೆ ಲಿಖಿತ ರೂಪದಲ್ಲಿಮನವಿ ಸಲ್ಲಿಸಬೇಕು. ಗೌರವಪೂರ್ವಕವಾಗಿ ಸಾಯುವುದೂ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.
ಇದಕ್ಕೆ ಮಾರ್ಗಸೂಚಿಗಳನ್ನು ಸೂಚಿಸಲಾಗಿದ್ದು ತಕ್ಕ ಕಾನೂನು ರೂಪಿಸಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಒಬ್ಬ ವ್ಯಕ್ತಿಗೆ ತನಗೆ ಅಳವಡಿಸಿರುವ ಜೀವ ರಕ್ಷಕ ಸಾಧನವನ್ನು ಯಾವಾಗ ತೆಗೆಯಬೇಕೆಂದು ನಿರ್ಧರಿಸುವ ಹಕ್ಕನ್ನು ನೀಡಬೇಕು ಎಂದು ಇದೀಗ ಸುಪ್ರೀಂ ಕೋರ್ಟ್ ತೀರ್ಪು ಹೇಳಿದೆ.