ಸಂಜಯ್ ಕುಮಾರ್ ಮಿಶ್ರಾ ಅಧಿಕಾರಾವಧಿ ವಿಸ್ತರಣೆಗೆ ಸುಪ್ರೀಂ ಸಮ್ಮತಿ

ಶುಕ್ರವಾರ, 28 ಜುಲೈ 2023 (11:41 IST)
ನವದೆಹಲಿ : ಸಂಜಯ್ ಕುಮಾರ್ ಮಿಶ್ರಾ ಅವರನ್ನು ಸೆಪ್ಟೆಂಬರ್ 15 ರವರೆಗೆ ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಮುಂದುವರಿಸಲು ಸುಪ್ರೀಂಕೋರ್ಟ್ ಗುರುವಾರ ಅನುಮತಿ ನೀಡಿದೆ.
 
ಕೇಂದ್ರ ಸರ್ಕಾರ ಅವರ ಅಧಿಕಾರಾವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸುವಂತೆ ಕೋರಿದ ಹಿನ್ನೆಲೆ ಮನವಿಯನ್ನು ಪರಿಷ್ಕರಿಸಿ ಪುರಸ್ಕರಿಸಿದೆ. ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ ಪರಿಶೀಲನೆಯಲ್ಲಿ ಮಿಶ್ರಾ ಅವರ ಅನುಪಸ್ಥಿತಿಯು ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆ ರಾಷ್ಟ್ರದ ಹಿತಾಸಕ್ತಿಯಿಂದ ಕೇಂದ್ರ ಸರ್ಕಾರದ ಮನವಿಯನ್ನು ಪರಿಗಣಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

1984ರ ಬ್ಯಾಚ್ನ ಐಆರ್ಎಸ್ ಅಧಿಕಾರಿ ಮಿಶ್ರಾ ಅವರನ್ನು ಇಡಿ ಮುಖ್ಯಸ್ಥರಾಗಿ ಮೂರನೇ ಬಾರಿಗೆ ಮಾಡಿದ ಅಧಿಕಾರಾವಧಿಯ ವಿಸ್ತರಣೆಯು ಕಾನೂನುಬಾಹಿರ ಮತ್ತು 2021ರಲ್ಲಿ ಅದರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿತ್ತು. ಆದಾಗ್ಯೂ, ಸುಗಮ ವರ್ಗಾವಣೆಗೆ ಅವಕಾಶ ನೀಡಲು ಜುಲೈ 31ರವರೆಗೆ ಅಧಿಕಾರದಲ್ಲಿ ಮುಂದುವರಿಯಲು ಅವರಿಗೆ ಅನುಮತಿ ನೀಡಿತು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ