ಅದಾನಿ ಕಂಪನಿಗಳ ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ

ಗುರುವಾರ, 2 ಮಾರ್ಚ್ 2023 (16:01 IST)
ನವದೆಹಲಿ : ಅದಾನಿ ಗ್ರೂಪ್ ಆಫ್ ಕಂಪನಿಗಳ ವಿರುದ್ಧ ಹಿಂಡೆನ್ಬರ್ಗ್ ಸಂಶೋಧನಾ ವರದಿ ಮಾಡಿರುವ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್, ನಿವೃತ್ತ ನ್ಯಾಯಾಧೀಶ ಎ.ಎಂ ಸಪ್ರೆ ನೇತೃತ್ವದಲ್ಲಿ ಆರು ಮಂದಿಯ ಸಮಿತಿಯನ್ನು ರಚಿಸಿದೆ.
 
ಸಮಿತಿಯೂ ಒ.ಪಿ. ಭಟ್, ನ್ಯಾಯಮೂರ್ತಿ ಜೆ.ಪಿ. ದೇವಧರ್, ಕೆ.ವಿ. ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರ್ ಸುಂದರೇಶನ್ ಅವರನ್ನು ಒಳಗೊಂಡಿರಲಿದೆ ಎಂದು ಸಿಜೆಐ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠ ತಿಳಿಸಿದೆ. 

ಸಮಿತಿಯೂ ಅದಾನಿ ಕಂಪನಿಗಳಲ್ಲಿ ಅಕ್ರಮ ನಡೆದಿದೆಯೇ? ಷೇರುಗಳ ಮೌಲ್ಯ ಹೆಚ್ಚಿಸಲು ಕೃತಕ ಪ್ರಯತ್ನಗಳು ನಡೆದಿವೆಯೇ? ಸೆಬಿ ನಿಯಮಗಳ ಸೆಕ್ಷನ್ 19 ರ ಉಲ್ಲಂಘನೆಯಾಗಿದೆಯೇ? ಹೂಡಿಕೆದಾರರ ರಕ್ಷಣೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಕೋರ್ಟ್ ಸೂಚಿಸಿದೆ.

ತನಿಖೆಯನ್ನು ನಡೆಸಿ ಎರಡು ತಿಂಗಳೊಳಗೆ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ಗೆ ವರದಿ ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ. ಸಮಿತಿಯನ್ನು ರಚಿಸುವುದರಿಂದ ಸೆಬಿಯ ಸ್ವಾತಂತ್ರ್ಯ ಮತ್ತು ಅದರ ತನಿಖಾ ಪ್ರಕ್ರಿಯೆಗಳಿಗೆ ಅಡ್ಡಿಯಾಗುವುದಿಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ