ಗೋಹತ್ಯೆ ನಿಷೇಧಕ್ಕೆ ಸುಪ್ರೀಂ ನಕಾರ

ಶುಕ್ರವಾರ, 27 ಜನವರಿ 2017 (12:24 IST)
ಗೋಹತ್ಯೆ ನಿಷೇಧ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. 
ಗೋ ಹತ್ಯೆ ನಿಷೇಧವಿರುವ ರಾಜ್ಯಗಳಿಂದ ಇತರ ರಾಜ್ಯಗಳಿಗೆ ಗೋ ಸಾಗಾಣಿಕೆ ನಡೆಯುತ್ತಿದೆ. ಇದನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕು. ಭಾರತದ ಕೆಲವು ರಾಜ್ಯಗಳಲ್ಲಿ ಮಾತ್ರ ಗೋ ಹತ್ಯೆ ನಿಷೇಧವಿದೆ. ಎಲ್ಲಾ ರಾಜ್ಯಗಳಲ್ಲೂ ಗೋ ಹತ್ಯೆ ನಿಷೇಧ ಜಾರಿಯಾಗಬೇಕು ಎಂದು  ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು.
 
ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಗೋವು ಸಾಗಣೆ ಮತ್ತು ಅದಕ್ಕೆ ಸಂಬಂಧಿಸಿದ ನಿಯಮಗಳನ್ನು ರೂಪಿಸುವಂತೆ ಈಗಾಗಲೇ ಎಲ್ಲ ರಾಜ್ಯಗಳಿಗೆ ಈಗಾಗಲೇ ಆದೇಶ ನೀಡಿದ್ದೇವೆ ಎಂದು ಕೋರ್ಟ್ ತಿಳಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ