ಮನೀಶ್ ಸಿಸೋಡಿಯಾಗೆ ಮಧ್ಯಂತರ ಜಾಮೀನು ನೀಡದ ಸುಪ್ರೀಂಕೋರ್ಟ್

ಸೋಮವಾರ, 7 ಆಗಸ್ಟ್ 2023 (14:22 IST)
ನವದೆಹಲಿ : ಹೊಸ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಪಟ್ಟಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
 
ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ಪೀಠ ಜಾಮೀನು ನಿರಾಕರಿಸಿದೆ. ಮನೀಶ್ ಸಿಸೋಡಿಯಾ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸಿಸೋಡಿಯಾ ಪತ್ನಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಏಪ್ರಿಲ್ನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೃದ್ಧ ತಾಯಿಯೊಂದಿಗೆ ಅವರು ವಾಸಿಸುತ್ತಿದ್ದು, ಮಗ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಪತ್ನಿಯ ಆರೋಗ್ಯ ನೋಡಿಕೊಳ್ಳುವ ಅಗತ್ಯವಿರುವ ಹಿನ್ನೆಲೆ ಒಂದೆರಡು ವಾರಗಳ ಕಾಲ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಅವರು ಕೋರ್ಟ್ಗೆ ಪೂರಕ ದಾಖಲೆಗಳನ್ನು ಸಲ್ಲಿಸಿದರು. ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಧೀಶರು ಸಿಸೋಡಿಯಾ ಪತ್ನಿಯ ಆರೋಗ್ಯದಲ್ಲಿ ಸ್ಥಿರತೆ ಕಂಡು ಬಂದಿದ್ದು ಜಾಮೀನು ಅರ್ಜಿಯನ್ನು ಮುಂದಿನ ದಿನಗಳಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿದರು. ಅರ್ಜಿಯನ್ನು ಸೆಪ್ಟೆಂಬರ್ 4 ಕ್ಕೆ ಮುಂದೂಡಲಾಯಿತು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ