ನವದೆಹಲಿ : ಜ್ಞಾನವ್ಯಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಡೆಸುತ್ತಿರುವ ಸರ್ವೆ ಕಾರ್ಯಕ್ಕೆ ಬುಧವಾರ ಸಂಜೆವರೆಗೂ ಸುಪ್ರೀಂಕೋರ್ಟ್ ತಡೆ ನೀಡಿದೆ.
ವಾರಣಾಸಿ ಜಿಲ್ಲಾ ನ್ಯಾಯಲಯದ ಆದೇಶದ ವಿರುದ್ಧ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ನೀಡಿದೆ. ಅಂಜುಮನ್ ಇಂಟೆಝಾಮಿಯಾ ಮಸೀದಿಯ ನಿರ್ವಹಣಾ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ತಾತ್ಕಾಲಿಕ ತಡೆ ನೀಡಿದೆ. ಅಲ್ಲದೇ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.