ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಉದ್ಯೋಗದ ಭರವಸೆಯಲ್ಲಿದ್ದ 13 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳ ಕನಸಿಗೆ ತಣ್ಣೀರೆರೆಚದಂತಾಗಿದೆ.ಆಯ್ಕೆ ಪ್ರಕ್ರಿಯೆಯಲ್ಲಿ ತೇರ್ಗಡೆಯಾಗಿದ್ದ ಅಭ್ಯರ್ಥಿಗಳಿಗೆ ಈಗಾಗಲೇ ನೇಮಕಾತಿ ಪತ್ರ ವಿತರಣೆಯೂ ಸಹ ಪ್ರಾರಂಭವಾಗಿತ್ತು.