ಸುಪ್ರೀಂಕೋರ್ಟ್ ನಲ್ಲಿ ಇಂದು ಮತ್ತೊಂದು ಮಹಾ ತೀರ್ಪು
ಶಬರಿಮಲೆ ದೇಗುಲಕ್ಕೆ ಮಹಿಳೆಯರು ಪ್ರವೇಶಿಸಬೇಕೋ ಬೇಡವೋ ಎಂಬ ಬಗ್ಗೆ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ತೀರ್ಪು ಹೊರಬೀಳಲಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಲಿದೆ.
ಅಲ್ಲದೆ, ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣ ಮತ್ತು ಪ್ರಧಾನಿ ಮೋದಿ ಹತ್ಯೆ ಸಂಚು ಆರೋಪದಲ್ಲಿ ಐವರು ಹೋರಾಟಗಾರರನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಲಿದೆ. ಹೀಗಾಗಿ ಇಂದು ಮತ್ತೊಮ್ಮೆ ಸುಪ್ರೀಂಕೋರ್ಟ್ ತೀರ್ಪಿನತ್ತ ಎಲ್ಲರ ದೃಷ್ಟಿ ನೆಟ್ಟಿದೆ.