ಅನಿಲ್‌ ಅಂಬಾನಿಗೆ ನಾಲ್ಕು ವಾರದೊಳಗೆ ಹಣ ಪಾವತಿಸದಿದ್ದರೆ ಜೈಲಿಗೆ ಹೋಗಿ ಎಂದ ಸುಪ್ರೀಂ ಕೋರ್ಟ್

ಬುಧವಾರ, 20 ಫೆಬ್ರವರಿ 2019 (15:24 IST)
ನವದೆಹಲಿ : ಎರಿಕ್ಸನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಿಕ್ಸನ್‌ ನೀಡಬೇಕಾಗಿರುವ ಹಣವನ್ನು ನಾಲ್ಕು ವಾರದ ಒಳಗಾಗಿ ಪಾವತಿಸುವಂತೆ ರಿಯಲನ್ಸ್ ಸಂಸ್ಥೆಯ ಅನಿಲ್‌ ಅಂಬಾನಿಗೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.


ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ಆರ್.ಎಫ್.ನಾರಿಮನ್ ಮತ್ತು ವಿನೀತ್ ಸಹರಾನ್ ಅವರು ಎರಿಕ್ಸನ್ ಕಂಪನಿಗೆ ನಾಲ್ಕು ವಾರದ ಒಳಗಾಗಿ 453 ಕೋಟಿ ರೂ. ಪಾವತಿಸಬೇಕು. ಒಂದು ವೇಳೆ ಹಣ ಪಾವತಿಸದಿದ್ದರೆ ಮೂರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಮಹತ್ವದ ಆದೇಶ ಪ್ರಕಟಿಸಿದೆ.


ಈ ಪ್ರಕರಣದಲ್ಲಿ ಅನಿಲ್ ಅಂಬಾನಿ ಜೊತೆ ರಿಲಯನ್ಸ್ ಟೆಲಿಕಾಂ ಮುಖ್ಯಸ್ಥ ಸತೀಶ್ ಸೇಠ್ ಮತ್ತು ರಿಲಯನ್ಸ್ ಇನ್ಫ್ರಾಟೆಲ್ ಮುಖ್ಯಸ್ಥೆ ಛಾಯಾ ವೈರನಿ ಸಹ ದೋಷಿಯಾಗಿದ್ದಾರೆ ಎಂದು ಹೇಳಿ ಅವರಿಗೂ ದಂಡ ವಿಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ