ಆಸಾರಾಂ ಬಾಪುಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ

ಗುರುವಾರ, 11 ಆಗಸ್ಟ್ 2016 (17:47 IST)
ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ಸೆರೆಮನೆ ಸೇರಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರಿಗೆ ವೈದ್ಯಕೀಯ ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿತು.
 
ಅಸಾರಾಂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ರಾಜಸ್ಥಾನ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದ ನ್ಯಾಯಮೂರ್ತಿ ಮದನ್. ಬಿ. ಲೋಕೂರ ಮತ್ತು ನ್ಯಾಯಮೂರ್ತಿ ಆರ್.ಕೆ. ಅಗ್ರ​ವಾಲ್ ನೇತೃತ್ವದ ಪೀಠ, ಅವರು ಹೇಳುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಪರೀಕ್ಷಿಸಲು ತ್ರಿಸದಸ್ಯ ವೈದ್ಯಕೀಯ ಸಮಿತಿಯೊಂದನ್ನು ರಚಿಸುವಂತೆ ನ್ಯಾಯಾಲಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಗೆ ಆದೇಶ ನೀಡಿದೆ.
 
ಪಂಚಕರ್ಮ ಆಯುರ್ವೇದ ಚಿಕಿತ್ಸೆ ಪಡೆದುಕೊಳ್ಳಲು ಕೇರಳಕ್ಕೆ ಹೋಗಬೇಕಾದ್ದರಿಂದ ಒಂದು ಅಥವಾ ಎರಡು ತಿಂಗಳು ಮಧ್ಯಂತರ ಜಾಮೀನು ನೀಡುವಂತೆ ಆಸಾರಾಂ ಬಾಪು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ವೆಬ್ದುನಿಯಾವನ್ನು ಓದಿ