ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ನಕಾರ

ಸೋಮವಾರ, 24 ಜುಲೈ 2017 (14:43 IST)
ನವದೆಹಲಿ:1989-90 ರ ಅವಧಿಯಲ್ಲಿ ಕಾಶ್ಮೀರದಲ್ಲಿ ನಡೆದ 700 ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿದ 215 ಪ್ರಕರಣಗಳ ಮರುತನಿಖೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣದ ಮರು ತನಿಖೆ ನಡೆಸಿ, ಪ್ರತ್ಯೇಕತಾವಾದಿ ಮುಖಂಡ ಯಾಸಿನ್ ಮಲಿಕ್ ಸೇರಿದಂತೆ ಹಲವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
 
ಘಟನೆ ನಡೆದು ಸುಮಾರು 27 ವರ್ಷಗಳು ಕಳೆದಿದೆ. ಆ ನಿಟ್ಟಿನಲ್ಲಿ ಕಾಶ್ಮೀರಿ ಪಂಡಿತರ ಕೊಲೆ, ಲೂಟಿ, ಬೆಂಕಿ ಹಚ್ಚಿದ ಪ್ರಕರಣದ ಕುರಿತು ಸಾಕ್ಷ್ಯಾಧಾರವನ್ನು ಸಂಗ್ರಹಿಸುವುದು ತುಂಬಾ ಕಷ್ಟದ ಕೆಲಸ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಹಾಗೂ ಜಸ್ಟೀಸ್ ಡಿವೈ ಚಂದ್ರಾಚೂಡ್ ನೇತೃತ್ವದ ಪೀಠ, 27 ವರ್ಷಗಳ (ಅರ್ಜಿದಾರರು) ಕಳೆದ ಮೇಲೆ ಅರ್ಜಿ ಸಲ್ಲಿಸಿದ್ದೀರಿ, ಈಗ ಸಾಕ್ಷ್ಯ ಎಲ್ಲಿಂದ ಬರಲು ಸಾಧ್ಯ ಎಂದು ಪ್ರಶ್ನಿಸಿದೆ.
 
ರೂಟ್ಸ್ ಆಫ್ ಕಾಶ್ಮೀರ್ ಸಂಘಟನೆಯ ಪರ ವಕೀಲ ವಿಕಾಸ್ ಪಡೋರಾ  ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
 

ವೆಬ್ದುನಿಯಾವನ್ನು ಓದಿ