ಶಾಲೆಗಳಲ್ಲಿ ಯೋಗ ಕಡ್ಡಾಯ: ಬಿಜೆಪಿ ನಾಯಕರ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಮಂಗಳವಾರ, 8 ಆಗಸ್ಟ್ 2017 (16:56 IST)
ದೇಶಾದ್ಯಂತ 1-8 ತರಗತಿಗಳ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಕಡ್ಡಾಯ ಮಾಡುವಂತೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿದ್ಯಾರ್ಥಿಗಳಿಗೆ ಯಾವುದನ್ನು ಕಲಿಸಬೇಕು ಎನ್ನುವುದು ಕೋರ್ಟ್ ನಿರ್ಧರಿಸುವುದಿಲ್ಲ. ಸರಕಾರಗಳ ಮಾತ್ರ ಇಂತಹ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ ಎಂದು ತಿಳಿಸಿದೆ.
ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಕಡ್ಡಾಯಗೊಳಿಸಬೇಕು ಎನ್ನುವ ಅರ್ಜಿಯನ್ನು ತಿರಸ್ಕರಿಸಿದ, ನ್ಯಾಯಮೂರ್ತಿ ಎಂ. ಬಿ ಲೋಕೂರ್ ನೇತೃತ್ವದ ಪೀಠ, ಶಾಲೆಗಳಲ್ಲಿ ಏನು ಕಲಿಸಬೇಕು ಎನ್ನುವುದನ್ನು ಹೇಳಲು ನಾವು ಯಾರು? ಅದು ನಮ್ಮ ವ್ಯವಹಾರವಲ್ಲ, ಅದನ್ನು ನಾವು ಹೇಗೆ ನಿರ್ದೇಶಿಸಲು ಸಾಧ್ಯ ಎಂದು ಹೇಳಿದರು.
 
ಮುಂಚಿನ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೋರ್ಟ್‌ನಲ್ಲಿ ವಾದ ಮಂಡಿಸಿ, ಯೋಗ ಶಿಕ್ಷಣ ಕಡ್ಡಾಯಗೊಳಿಸಿ ಮಕ್ಕಳ ಹಕ್ಕು ಅಡಿಯಲ್ಲಿ ಮೂಲಭೂತ ಹಕ್ಕು ಎಂದು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ತಿಳಿಸಿದೆ. 
 
ಅರ್ಜಿದಾರ ಮತ್ತು ದೆಹಲಿ ಬಿಜೆಪಿ ವಕ್ತಾರ ಮತ್ತು ಜೆ.ಸಿ. ಸೇಥ್ ಮತ್ತು ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ ಅರ್ಜಿಗೆ ಸ್ಪಂದಿಸಲು ಸಾಧ್ಯವಿಲ್ಲ ಎಂದು ಹೇಳಿದೆ. "ಶಾಲೆಗಳಲ್ಲಿ ಏನು ಕಲಿಸಬೇಕು ಎನ್ನುವುದು ಮೂಲಭೂತ ಹಕ್ಕು ಅಲ್ಲ" ಎಂದು ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ