ನವದೆಹಲಿ: ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಹಿಂದೂಗಳ ಪ್ರಾರ್ಥನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಮತ್ತೊಮ್ಮೆ ಹಿಂದೂಗಳಿಗೆ ಮೇಲುಗೈಯಾಗಿದೆ.
ವಾರಣಾಸಿಯ ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ ಮಸೀದಿ ಆವರಣದೊಳಗೆ ಹಿಂದೂಗಳ ಧಾರ್ಮಿಕ ಆಚರಣೆಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿ ಎಂದಿದೆ.
ಜನವರಿ 17 ಮತ್ತು ಜನವರಿ 31 ರ ಆದೇಶದ ನಂತರ ಮುಸ್ಲಿಂ ಸಮುದಾಯದಿಂದ ನಮಾಜ್ ಮತ್ತು ಹಿಂದೂಗಳ ಪೂಜೆಯನ್ನು ತೆಹ್ಖಾನ ಪ್ರದೇಶಕ್ಕೆ ಸೀಮಿತಗೊಳಿಸಲಾಗಿದೆ. ಈ ಅಂಶಕ್ಕೆ ಅನುಗುಣವಾಗಿ ಯಥಾಸ್ಥಿತಿ ಕಾಯ್ದುಕೊಳ್ಳುವುದು ಸೂಕ್ತ ಎಂದು ಸುಪ್ರೀಂ ಹೇಳಿದೆ.
ಹಿಂದೂಗಳ ಪೂಜೆಗೆ ಅವಕಾಶ ನೀಡಿದ ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಆಡಳಿತ ಮಂಡಳಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ಮಸೀದಿ ಸಮಿತಿಯ ಮನವಿಗೆ ಏಪ್ರಿಲ್ 30 ರೊಳಗಾಗಿ ಹಿಂದೂ ಅರ್ಚಕ ಶೈಲೇಂದ್ರ ಕುಮಾರ್ ಪಾಠಕ್ ವ್ಯಾಸ್ ಅವರ ಪ್ರತಿಕ್ರಿಯೆಯನ್ನು ಕೇಳಿದೆ.