Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

Krishnaveni K

ಗುರುವಾರ, 17 ಏಪ್ರಿಲ್ 2025 (16:52 IST)
ನವದೆಹಲಿ: ವಕ್ಫ್ ತಿದ್ದುಪಡಿ ಬಿಲ್ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ಕಾಯಿದೆಗೆ ಅಂಕುಶ ಹಾಕಿದೆ.

ವಕ್ಫ್ ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಹಲವಾರು ಅರ್ಜಿಗಳು ಬಂದಿದ್ದವು. ಅದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ನೀಡಿದೆ.

ವಕ್ಫ್ ಹೊಸ ಕಾಯಿದೆಗೆ ಕೆಲವು ಅಂಕುಶ ಹಾಕಿದೆ. ವಕ್ಫ್ ತಿದ್ದುಪಡಿಗೆ ಪೂರ್ಣ ಪ್ರಮಾಣದ ತಡೆ ನೀಡಲು ನಿರಾಕರಿಸಿದ ಪರಮೋಚ್ಛ ನ್ಯಾಯಾಲಯ ವಕ್ಫ್ ಆಸ್ತಿಗಳಲ್ಲಿ ಯಾವುದೇ ಬದಲಾವಣೆ ಮಾಡದಂತೆ ಮತ್ತು ಮುಸ್ಲಿಮೇತರ ಸದಸ್ಯರನ್ನು ಮಂಡಳಿಗೆ ನೇಮಕ ಮಾಡದಂತೆ ತಡೆ ನೀಡಿದೆ.

ನಿನ್ನೆ ಮುಸ್ಲಿಮೇತರ ಸದಸ್ಯರನ್ನು ನೇಮಕ ಮಾಡುವ ವಿಚಾರಕ್ಕೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿತ್ತು. ಕೇಂದ್ರ ಸರ್ಕಾರಕ್ಕೆ ಈಗ ಪ್ರತಿಕ್ರಿಯೆ ನೀಡಲು ಒಂದು ವಾರದ ಕಾಲಾವಕಾಶ ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಮೇ 5 ಕ್ಕೆ ಮುಂದೂಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ