ಬಿಹಾರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಬುಧವಾರ, 10 ಮೇ 2023 (07:58 IST)
ನವದೆಹಲಿ : ದರೋಡೆಕೋರ, ರಾಜಕಾರಣಿ ಆನಂದ್ ಮೋಹನ್ನನ್ನು ಅವಧಿ ಮುನ್ನವೇ ಜೈಲಿನಿಂದ ಬಿಡುಗಡೆ ಮಾಡಿದ್ದಕ್ಕೆ ಸುಪ್ರೀಂ ಕೋರ್ಟ್ ಬಿಹಾರ ಸರ್ಕಾರಕ್ಕೆ ಸೋಮವಾರ ನೋಟಿಸ್ ಜಾರಿ ಮಾಡಿದೆ.
 
ಅಲ್ಲದೆ ಸರ್ಕಾರ ಎರಡು ವಾರಗಳಲ್ಲಿ ಉತ್ತರಿಸಬೇಕು ಎಂದು ನ್ಯಾಯಾಲಯ ಎಚ್ಚರಿಸಿದೆ. ಐಎಎಸ್ ಅಧಿಕಾರಿ ಜಿ ಕೃಷ್ಣಯ್ಯ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಆನಂದ್ ಮೋಹನ್ನನ್ನು ಬಿಹಾರ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿತ್ತು.

ಇದನ್ನು ಪ್ರಶ್ನಿಸಿ ಕೃಷ್ಣಯ್ಯ ಪತ್ನಿ ಉಮಾ ಕೃಷ್ಣಯ್ಯ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಸುಪ್ರೀಂ ಪ್ರತಿಕ್ರಿಯೆಯಿಂದ ನನಗೆ ಸಂತಸವಾಗಿದೆ. ನ್ಯಾಯ ಸಿಗುವ ಭರವಸೆ ಇದೆ ಎಂದು ಅವರು ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ