ಮಮತಾ, ಸ್ಟಾಲಿನ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಶುಕ್ರವಾರ, 12 ಮೇ 2023 (21:20 IST)
ನವದೆಹಲಿ : `ದಿ ಕೇರಳ ಸ್ಟೋರಿ’ ಚಿತ್ರದ ನಿಷೇಧ ಕುರಿತು ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
 
ಪಶ್ಚಿಮ ಬಂಗಾಳವು ದೇಶದ ಇತರ ರಾಜ್ಯಗಳಿಗಿಂತ ಭಿನ್ನವಾಗಿಲ್ಲ. ಅದೇ ಪ್ರಜಾಪ್ರಭುತ್ವದ ಅಂಶಗಳನ್ನು ಹೊಂದಿರುವ ಎಲ್ಲಾ ರಾಜ್ಯಗಳಲ್ಲಿ ಚಿತ್ರ ಓಡುತ್ತಿದೆ. ಆದರೆ ಪಶ್ಚಿಮ ಬಂಗಾಳ ಚಿತ್ರವನ್ನು ಏಕೆ ನಿಷೇಧಿಸಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಅಲ್ಲದೆ ಥಿಯೇಟರ್ಗಳಿಗೆ ಭದ್ರತೆ ಒದಗಿಸಿರುವ ಕುರಿತು ತಮಿಳುನಾಡು ಸರ್ಕಾರಕ್ಕೆ ಕಾರಣ ಕೇಳಿದೆ.

ಅರ್ಜಿದಾರರಾದ ಚಲನಚಿತ್ರ ನಿರ್ಮಾಪಕ, ಪಶ್ಚಿಮ ಬಂಗಾಳ ಚಿತ್ರವನ್ನು ನಿಷೇಧ ಮಾಡಿರುವುದರಿಂದ ಆರ್ಥಿಕವಾಗಿ ನಷ್ಟವಾಗುತ್ತಿದೆ. ಅಲ್ಲದೆ ತಮಿಳುನಾಡು ಸಹ ಚಿತ್ರ ನಿಷೇಧಕ್ಕೆ ಮುಂದಾಗಿದೆ. ಅಲ್ಲದೆ ಇದು ಸವಿಂಧಾನದ 19 (1) (ಎ) ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಯತ್ನ ಎಂದು ಮೇ 10 ರಂದು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು.

ಚಿತ್ರ ನಿಷೇಧವು ಚಲನಚಿತ್ರದಿಂದ ಬರುವ ಆದಾಯವನ್ನು ಕಡಿತಗೊಳಿಸುವ ಉದ್ದೇಶದಿಂದ ಮಾಡಲಾಗಿದೆ. ಅಲ್ಲದೆ ಇದು ಚಲನಚಿತ್ರದ ಪೈರಸಿ ಪ್ರಚೋದನೆಯನ್ನು ನೀಡುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ