ಸೂರತ್ ಅಗ್ನಿ ದುರಂತ: 18 ವಿದ್ಯಾರ್ಥಿಗಳ ಮಾರಣಹೋಮ

ಶುಕ್ರವಾರ, 24 ಮೇ 2019 (18:49 IST)
ಗುಜರಾತ್‌ನ ಸೂರತ್‌ನಲ್ಲಿರುವ ಶಾಪಿಂಗ್‌ಮಾಲ್‌ನಲ್ಲಿರುವ ಕೋಚಿಂಗ್ ಕೇಂದದಲ್ಲಿ ಅಗ್ನಿಅವಘಡ ಸಂಭವಿಸಿದ್ದು 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಸಂಜೆ ಶಾರ್ಟ್ ಸಕ್ರೀಟ್‌ನಿಂದ ಕೋಚಿಂಗ್‌ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನೋಡು ನೋಡುತ್ತಲೇ ಭಾರಿ ಅಗ್ನಿ ಅನಾಹುತಕ್ಕೆ ಕಾರಣವಾಗಿದೆ.
 
ಕೂಡಲೇ ಅಗ್ನಿ ಅನಾಹುತ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಕಟ್ಟಡದಲ್ಲಿದ್ದು ಹಲವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
 
ಕಟ್ಟಡದಲ್ಲಿ ಇನ್ನು ಹಲವರಿದ್ದು ಅವರನ್ನು ರಕ್ಷಿಸಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
 
ಬೆಂಕಿಯ ಭೀತಿಯಿಂದಾಗಿ ಕಟ್ಟಡದ ಮೇಲಿನಿಂದ ಕೆಲವರು ಜಂಪ್ ಮಾಡಿದ್ದಾರೆ. ವಿದ್ಯಾರ್ಥಿಗಳು ಜಂಪ್ ಮಾಡುತ್ತಿರುವ ದೃಶ್ಯಗಳು ಭಯ ಹುಟ್ಟಿಸುವಂತಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ