ಶಸ್ತ್ರಚಿಕಿತ್ಸೆ : ಲಾಲು ಪ್ರಸಾದ್ ಯಾದವ್ಗೆ ಮಗಳ ಕಿಡ್ನಿ ಕಸಿ

ಮಂಗಳವಾರ, 6 ಡಿಸೆಂಬರ್ 2022 (10:18 IST)
ಪಾಟ್ನಾ : ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಸಿಂಗಾಪುರದಲ್ಲಿ ಯಶಸ್ವಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಒಳಗಾಗಿದ್ದಾರೆ.

ಸಿಂಗಾಪುರದಲ್ಲಿ ನೆಲೆಸಿರುವ ತಮ್ಮ ಪುತ್ರಿಯೇ ಲಾಲು ಅವರಿಗೆ ಕಿಡ್ನಿ ದಾನ ಮಾಡಿ ತಂದೆಗೆ ಹೊಸ ಬದುಕು ನೀಡಿದ್ದಾರೆ.

ಈ ಬಗ್ಗೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೋಮವಾರ ಟ್ವೀಟ್ ಮಾಡಿ, ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಸಿಂಗಾಪುರದಲ್ಲಿ ಯಶಸ್ವಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಹಾಗೂ ಅವರನ್ನು ಇದೀಗ ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ