ಸೀಮಿತ ದಾಳಿ ಬಹಿರಂಗ ಚರ್ಚೆ ಅನಗತ್ಯ: ಮಲ್ಲಿಕಾರ್ಜನ್ ಖರ್ಗೆ
ಗುರುವಾರ, 6 ಅಕ್ಟೋಬರ್ 2016 (14:12 IST)
ಮಿಟಿಟರಿ ಆಪರೇಶನ್ ಕುರಿತು ಬಹಿರಂಗವಾಗಿ ಚರ್ಚಿಸುವುದು ಬೇಡ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ಭಾರತೀಯ ಯೋಧರು ನಡೆಸಿದ ದಾಳಿಗೆ ಈಗಾಗಲೇ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಯೋಧರು ನಡೆಸಿದ ಆಪರೇಶನ್ ಕುರಿತು ಬಹಿರಂಗವಾಗಿ ಚರ್ಚಿಸಬಾರದು. ದೇಶ ರಕ್ಷಣೆಗಾಗಿ ನಮ್ಮ ಸೈನಿಕರು ತಮ್ಮ ಪ್ರಾಣವನ್ನು ಮುಡುಪಾಗಿಟ್ಟಿದ್ದಾರೆ. ಅಂತಿಮವಾಗಿ ನಮಗೆ ದೇಶವೇ ಮುಖ್ಯವಾಗುತ್ತದೆ ಎಂದರು.
ದೇಶದ ಭದ್ರತೆ ದೃಷ್ಟಿಯಿಂದ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಭಾರತೀಯ ಸೇನೆ ಶಕ್ತವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ಭಾರತೀಯ ಯೋಧರು ನಡೆಸಿದ ದಾಳಿಗೆ ಈಗಾಗಲೇ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ ಎಂದು ಸ್ಪಷ್ಟಪಡಿಸಿದರು.
ಕಳಸಾ ಬಂಡೂರಿ ಹಾಗೂ ಮಹದಾಯಿ ಜಲ ವಿವಾದ ಕುರಿತು ಮುಂಬೈನಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ