ಸುಶಾಂತ್ ಸಿಂಗ್ ರಜಪೂತ್ ಗೆಳತಿ ನಟಿ ರಿಯಾಗೆ ಸೋಶಿಯಲ್ ಮೀಡಿಯಾದಲ್ಲಿ ರೇಪ್ ಮತ್ತು ಕೊಲೆ ಬೆದರಿಕೆ

ಶುಕ್ರವಾರ, 17 ಜುಲೈ 2020 (08:13 IST)
ಮುಂಬೈ : ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ರೇಪ್ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ನಟಿ ರಿಯಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆ ಹಾಕಿದ್ದು, ಒಂದು ವೇಳೆ ನೀನು ಆತ್ಮಹತ್ಯೆ ಮಾಡಿಕೊಳ್ಳದಿದ್ರೆ ನಿನ್ನನ್ನು ರೇಪ್ ಮಾಡಿ ಕೊಲೆ ಮಾಡುತ್ತೇವೆ. ನಿನ್ನ ಕೊಲೆ ಮಾಡಲು ಜನರನ್ನು ಕಳಿಸುತ್ತಿದ್ದೇವೆ ಎಂದು ಬೆದರಿಕೆ ಹಾಕಿದ್ದಾರೆ.

ನಟಿ ರಿಯಾ ಈ ಬೆದರಿಕೆ ಸಂದೇಶದ ಸ್ಕ್ರೀನ್ ಶಾಟ್ ತೆಗೆದು ಸೈಬರ್ ಕ್ರೈಂ ವಿಭಾಗಕ್ಕೆ ಟ್ಯಾಗ್ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ