ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಇನ್ನಿಲ್ಲ!

ಬುಧವಾರ, 7 ಆಗಸ್ಟ್ 2019 (06:44 IST)
ನವದೆಹಲಿ : ಕೇಂದ್ರ ಮಾಜಿ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.




ಇವರಿಗೆ 67 ವರ್ಷ ವಯಸ್ಸಾಗಿದ್ದು, ಮಂಗಳವಾರ ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನಲೆಯಲ್ಲಿ  ಅವರನ್ನು ತಕ್ಷಣವೇ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ