2019 ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಸುಷ್ಮಾ ಸ್ವರಾಜ್: ಕಾರಣವೇನು ಗೊತ್ತಾ?!
ಇಂದೋರ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುಷ್ಮಾಗೆ ಪತ್ರಕರ್ತರೊಬ್ಬರು ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಬಗ್ಗೆ ಪ್ರಶ್ನಿಸಿದರು. ಈ ವೇಳೆ ಉತ್ತರಿಸಿದ ಸುಷ್ಮಾ ತಮ್ಮ ನಿರ್ಧಾರವನ್ನು ಹೇಳಿದ್ದಾರೆ.
‘ಯಾವ ಅಭ್ಯರ್ಥಿ ನಿಲ್ಲಬೇಕು ಎನ್ನುವುದನ್ನು ಪಕ್ಷ ನಿರ್ಧರಿಸುತ್ತದೆ. ಆದರೆ ನಾನು ಮಾತ್ರ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದೇನೆ’ ಎಂದು ಸುಷ್ಮಾ ಹೇಳಿದ್ದಾರೆ. ಇದಕ್ಕೆ ತಮ್ಮ ಆರೋಗ್ಯ ಸಮಸ್ಯೆ ಕಾರಣ ಎಂದಿದ್ದಾರೆ. ಒಂದು ವರ್ಷದ ಹಿಂದಷ್ಟೇ ಸುಷ್ಮಾ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಆರೋಗ್ಯ ಸಮಸ್ಯೆಯಿಂದಾಗಿ ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಆಗದು ಎಂಬ ಕಾರಣಕ್ಕೆ ಅವರು ಚುನಾವಣೆಯಲ್ಲಿ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದಾರೆ.