ಇಂದು ಮಧ್ಯಾಹ್ನ 3 ಗಂಟೆಗೆ ಸುಷ್ಮಾ ಸ್ವರಾಜ್ ಅಂತ್ಯಕ್ರಿಯೆ

ಬುಧವಾರ, 7 ಆಗಸ್ಟ್ 2019 (06:46 IST)
ನವದೆಹಲಿ : ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ (67) ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದು, ಅವರ  ಅಂತ್ಯಕ್ರಿಯೆಯು ಮಧ್ಯಾಹ್ನ 3 ಗಂಟೆಯ ನಂತರ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.
ಮಂಗಳವಾರ ರಾತ್ರಿ ನಿಧನರಾದ ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರವನ್ನು ಜನಪತ್ ರಸ್ತೆಯ ಧವನ್ ದೀಪ್ ಕಟ್ಟಡದ ನಿವಾಸದಲ್ಲಿ ಇರಿಸಲಾಗಿದೆ. ಬುಧವಾರ ಬೆಳಗ್ಗೆ 8ರಿಂದ 11 ಗಂಟೆವರೆಗೆ ಜಂತರ್ ಮಂತರ್ ನಲ್ಲಿ ಇರಿಸಲಾಗುವುದು.


 ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2:30ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುವುದು. ಬಳಿಕ 3 ಗಂಟೆಯ ನಂತರ ಲೋಧಿ ರಸ್ತೆಯ ಶವಾಗಾರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ