ಸುಷ್ಮಾ ಸ್ವರಾಜ್ ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿ?!

ಗುರುವಾರ, 15 ಜೂನ್ 2017 (10:02 IST)
ನವದೆಹಲಿ: ರಾಷ್ಟ್ರಪತಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಆಡಳಿತಾರೂಢ ಬಿಜೆಪಿ ಯಾರನ್ನು ಅಭ್ಯರ್ಥಿಯಾಗಿ ಘೋಷಿಸಲಿದೆ ಎನ್ನುವದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಮೂಲಗಳ ಪ್ರಕಾರ ಸುಷ್ಮಾ ಸ್ವರಾಜ್ ಬಗ್ಗೆ ಬಿಜೆಪಿಯಲ್ಲಿ ಒಲವಿದೆಯಂತೆ.

 
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರನ್ನು ರಾಷ್ಟ್ರಪತಿ ಹುದ್ದೆಗೇರಿಸಲು ಬಿಜೆಪಿಯಲ್ಲಿ ಒಲವಿದೆ. ಇವರಿಗೆ ಆರ್ ಎಸ್ ಎಸ್ ಬೆಂಬಲವೂ ಇದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ.

ವಿರೋಧ ಪಕ್ಷಗಳಿಗೂ ಸಹಮತವಾಗುವ ಅಭ್ಯರ್ಥಿಯನ್ನು ಹುಡುಕುವ ಬದಲು ಸಮರ್ಥ ನಾಯಕಿ ಸುಷ್ಮಾ ಸ್ವರಾಜ್ ಗೇ ಈ ಗೌರವ ನೀಡುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ವಿರೋಧ ಪಕ್ಷಗಳಾದ ಮಮತಾ ಬ್ಯಾನರ್ಜಿ, ನವೀನ್ ಪಟ್ನಾಯಕ್ ರಂತಹ ನೇತಾರರೂ ಸುಷ್ಮಾರನ್ನು ವಿರೋಧಿಸಲಾರರು ಎಂಬುದು ಬಿಜೆಪಿ ಲೆಕ್ಕಾಚಾರ. ಈ ಮೊದಲು ಎಲ್ ಕೆ ಅಡ್ವಾಣಿಯವರನ್ನು ರಾಷ್ಟ್ರಪತಿಯಾಗಿ ಮಾಡುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿತ್ತು. ಆದರೆ ಅವರ ಮೇಲೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ನಡೆಯುತ್ತಿರುವುದರಿಂದ ಅವರ ಹೆಸರನ್ನು ಕೈ ಬಿಡಲಾಗಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ