ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿಯನ್ನ ಕಾಡಿಗಟ್ಟಿದ ಹಾಸ್ಟೆಲ್ ಸಿಬ್ಬಂದಿಗಳು ಅಮಾನತು
ಮಂಗಳವಾರ, 15 ಜನವರಿ 2019 (09:45 IST)
ಭುವನೇಶ್ವರ : ಅಪ್ರಾಪ್ತ ಬಾಲಕಿಯೊಬ್ಬಳು ಆದಿವಾಸಿ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ ಹಿನ್ನೆಲೆಯಲ್ಲಿ ಹಾಸ್ಟೆಲ್ ನ ಆರು ಮಂದಿ ಕೆಲಸಗಾರರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಒಡಿಶಾದ ಕಂಧಮಾಲ್ ಜಿಲ್ಲೆಯ ದರಿಂಗಿಬಾದಿಯಲ್ಲಿರುವ ‘ಸೇವಾ ಆಶ್ರಯ ಹೈಸ್ಕೂಲ್’ ಹಾಸ್ಟೆಲ್‍ನಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದ ಹಿನ್ನಲೆಯಲ್ಲಿ ಆಕೆ ಶನಿವಾರ ರಾತ್ರಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ವಿಚಾರ ತಿಳಿದ ಹಾಸ್ಟೆಲ್ ನ ಸಿಬ್ಬಂದಿಗಳು ಆಕೆ ಮತ್ತು ಮಗುವನ್ನು ಹಾಸ್ಟೆಲ್ ನಿಂದ ಹತ್ತಿರದ ಅರಣ್ಯಕ್ಕೆ ತಳ್ಳಿದ್ದಾರೆ.
ಅರಣ್ಯ ಅಧಿಕಾರಿಗಳು ಬಾಲಕಿಯನ್ನು ನೋಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ಗಂಭೀರವಾಗಿ ಪರಿಗಣಿಸಿದ ಸರ್ಕಾರ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಹಿನ್ನಲೆಯಲ್ಲಿ ಪೊಲೀಸರು ದರಿಂಗ್ ಬಾದಿ ಕಾಲೇಜಿನ ವಿದ್ಯಾರ್ಥಿಯೋರ್ವನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಹಾಸ್ಟೆಲ್‍ನ ಇಬ್ಬರು ಅಡುಗೆ ಭಟ್ಟರು, ಮಹಿಳಾ ಮೇಲ್ವಿಚಾರಕಿ , ಓರ್ವ ದಾದಿ ಹಾಗೂ ಶಾಲೆಯ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.