ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ನಡೆಸಲಾಗಿದೆ ಎಂಬ ಹಲ್ಲೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ನ್ಯಾಯಾಲಯವು ಪೊಲೀಸರು ಕಸ್ಟಡಿಗೆ ಒಪ್ಪಿಸಿದೆ.
ಬಿಭವ್ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಎಂದು ಹೇಳಲಾಗುತ್ತಿದೆ. ಮೇ 13 ರಂದು ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಸ್ವಾತಿ ಮಲಿವಾಲ್ ಬಂದಿದ್ದಾಗ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪ ಮಾಡಿದ್ದಾರೆ.
ಮೇ ೩೧ರ ವರೆಗೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ಕುಮಾರ್ ಅವರನ್ನು ಮೇ 31 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದ್ದಾರೆ.
ದೆಹಲಿ ಪೊಲೀಸರು ಕುಮಾರ್ ಅವರನ್ನು ಐದು ದಿನಗಳ ಕಸ್ಟಡಿಗೆ ಕೋರಿದ್ದರು. ಆದಾಗ್ಯೂ, ಕುಮಾರ್ ಅವರ ಕಸ್ಟಡಿ ವಿಚಾರಣೆಯನ್ನು ವಕೀಲರು ವಿರೋಧಿಸಿದ್ದರು. ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು.