ಭೋಪಾಲ್ : ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಇಸ್ಲಾಂ ಧರ್ಮವನ್ನು ಅವಮಾನಿಸಿದ ಆರೋಪದ ಮೇಲೆ ಟೈಲರ್ ಹತ್ಯೆ ಮಾಡಿರುವುದನ್ನು ಖಂಡಿಸಿದ್ದಾರೆ.
ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯ ಪ್ರಚಾರದ ಭಾಗವಾಗಿ ಭೋಪಾಲ್ನ ಅಶೋಕ ಗಾರ್ಡನ್ ಪ್ರದೇಶದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ನಾನು ಉದಯಪುರ ಘಟನೆಯನ್ನು ಖಂಡಿಸುತ್ತೇನೆ.
ಯಾರನ್ನಾದರೂ ಕೊಲ್ಲಲು ಕಾನೂನಿನಲ್ಲಿ ಅವಕಾಶವಿಲ್ಲ. ಯಾರೂ ಇತರರನ್ನು ಕೊಲ್ಲಲು ಸಾಧ್ಯವಿಲ್ಲ. ನಾವು ಕಾನೂನನ್ನು ಕೈಗೆ ತೆಗೆದುಕೊಳ್ಳುವುದಿಲ್ಲ. ಇದೊಂದು ಅಪರಾಧ. ಆದರೆ ನೂಪುರ್ ಶರ್ಮಾ ಅವರನ್ನೂ ಬಂಧಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಆಗ್ರಹಿಸಿದ್ದಾರೆ.
ಟೈಲರ್ ಹತ್ಯೆಯನ್ನು ಘೋರ ಎಂದು ಬಣ್ಣಿಸಿದ ಅವರು, ಸರ್ಕಾರವು ಆರೋಪಿಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು. ಹಿಂಸಾಚಾರವನ್ನು ವಿರೋಧಿಸುವುದು ಎಐಎಂಐಎಂ ಸ್ಥಿರವಾದ ನಿಲುವು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.