ಬಿಜೆಪಿ ಭ್ರಷ್ಟಚಾರದ ಬಗ್ಗೆ ಮಾತನಾಡಿ: ಕಾರ್ಯಕರ್ತರಿಗೆ ಸ್ಟಾಲಿನ್ ಸಲಹೆ

ಗುರುವಾರ, 14 ಸೆಪ್ಟಂಬರ್ 2023 (13:54 IST)
ನವದೆಹಲಿ : ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಿ. ಬಿಜೆಪಿ ನೇತೃತ್ವದ ಕೇಂದ್ರವನ್ನು ಭ್ರಷ್ಟಾಚಾರದ ಮೇಲೆ ಗುರಿಯಾಗಿಸಬೇಕು ಎಂದು ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.
 
ಸನಾತನ ಧರ್ಮವನ್ನು ರಕ್ಷಿಸುವ ದೃಷ್ಟಿಯಿಂದ ಪ್ರತಿ ಹೇಳಿಕೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದು, ಅವರು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆ ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ.

ಇದಕ್ಕೆ ಪೂರಕವಾಗಿ ಹೇಳಿಕೆ ನೀಡುವ ಮೂಲಕ ಕೇಂದ್ರ ಸಚಿವರೊಬ್ಬರು ಉದ್ದೇಶಪೂರ್ವಕವಾಗಿ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯ ವೈಫಲ್ಯಗಳನ್ನು ಮರೆಮಾಚುವ ತಂತ್ರಕ್ಕೆ ನಮ್ಮ ಜನರು ಬಲಿಯಾಗಬಾರದು.

ಭ್ರಷ್ಟಾಚಾರದ ಬಗ್ಗೆ ಚರ್ಚೆಯನ್ನು ತಡೆಯಲು ಬಿಜೆಪಿ ಬಯಸುತ್ತದೆ ಮತ್ತು ಸನಾತನ ಧರ್ಮದ ಮೇಲೆ ಕೇಂದ್ರೀಕರಿಸುವ ಮೂಲಕ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ. ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಹೆಚ್ಚು ಮಾತನಾಡಬೇಕು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ