ಚೆನ್ನೈ: ತಮಿಳು ನಟ, ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ರಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು 33 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ತಮಿಳುನಾಡಿನಲ್ಲಿ ಕರೂರಿನಲ್ಲಿ ರಾಲಿಯಲ್ಲಿ ವಿಜಯ್ ಭಾಗಿಯಾಗಿದ್ದರು. ಅವರನ್ನು ನೋಡಲು ನೂಕುನುಗ್ಗಲು ಉಂಟಾಗಿದ್ದು ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ವೇಳೆ ಕಾಲ್ತುಳಿತದಲ್ಲಿ ಮಕ್ಕಳು ಸೇರಿದಂತೆ 33 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಮೃತರು ಬಹುತೇಕ ಟಿವಿಕೆ ಪಕ್ಷದ ಬೆಂಬಲಿಗರು ಎನ್ನಲಾಗಿದೆ. ಸುಮಾರು 6 ಗಂಟೆಗಳ ಕಾಲ ಜನ ಕಾದು ನಿಂತಿದ್ದರು. ಆದರೆ ರಾಲಿ ತಡವಾಗಿ ಬಂದಿದ್ದರಿಂದ ಜನ ಸಂದಣಿ ಹೆಚ್ಚಾಗಿದೆ. ಈ ವೇಳೆ ಕಾಲ್ತುಳಿತ ಸಂಭವಿಸಿದೆ.
ತಕ್ಷಣವೇ ಸ್ಥಳಕ್ಕೆ ಅಂಬ್ಯುಲೆನ್ಸ್ ಗಳು ಬಂದಿದ್ದು ಮೃತದೇಹಗಳನ್ನು ಸಾಗಿಸಲಾಗಿದೆ. ಗಾಯಗೊಂಡವನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಎಂಕೆ ಸ್ಟಾಲಿನ್, ಇದು ಅತ್ಯಂತ ದುರದೃಷ್ಟಕರ ಘಟನೆ. ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.