ಇಂದು ತಮಿಳುನಾಡು ಬಂದ್‌

ಶುಕ್ರವಾರ, 16 ಸೆಪ್ಟಂಬರ್ 2016 (10:29 IST)
ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ತಮಿಳರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ತಮಿಳುನಾಡು ಬಂದ್‌ಗೆ ಕರೆ ನೀಡಿವೆ. 

ಪ್ರಮುಖ ವಿರೋಧ ಪಕ್ಷಗಳಾದ ಡಿಎಂಕೆ, ಕಾಂಗ್ರೆಸ್, ಡಿಎಂಡಿಕೆ, ತಮಿಳು ಮಾನಿಲ ಕಾಂಗ್ರೆಸ್, ಪಿಎಂಕೆ ಬಂದ್‌ಗೆ ಬೆಂಬಲ ನೀಡಿವೆ. ಆಡಳಿತಾರೂಡ ಎಐಡಿಎಂಕೆ ಬಂದ್‌ಗೆ ಬೆಂಬಲ ಸೂಚಿಸಿಲ್ಲ. 
 
ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಹೇಳಲಾಗುತ್ತಿದೆಯಾದರೂ ಮುಂಜಾನೆ ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿರುವ ದೃಶ್ಯಾವಳಿಗಳು ಕಂಡು ಬಂದಿದ್ದವು. ಮುಂಜಾನೆ 8.30ರವರೆಗೆ ಆಟೋ, ಬಸ್, ರೈಲು ಸಂಚಾರದಲ್ಲಿ ಯಾವುದೇ ವ್ಯತ್ಯಯವಿರಲಿಲ್ಲ. ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದವು. ಆದರೆ ಬಳಿಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದೆ. 
 
4,500ಕ್ಕೂ ಪೆಟ್ರೋಲ್ ಬಂಕ್‌ಗಳ ಬಾಗಿಲು ಮುಚ್ಚಲಿವೆ ಎಂದು ಪೆಟ್ರೋಲ್ ಮಾಲೀಕರ ಸಂಘ ಹೇಳಿದೆ. 
 
ರಾಜ್ಯದಾದ್ಯಂತ 50,000ಕ್ಕೂ ಹೆಚ್ಚು ಅಧಿಕ ಪೊಲೀಸರನ್ನು ನಿಯೋಜಿಲಾಗಿದೆ. 
 
ಕರ್ನಾಟಕದ ಮೂಲದ ಸಂಸ್ಥೆ, ಬ್ಯಾಂಕ್ ಮತ್ತು ಹೊಟೆಲ್‌ಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ