ತಮಿಳುನಾಡು ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ: ಐದು ಪೊಲೀಸರು ಅರೆಸ್ಟ್
ತಿರುಪ್ಪುವನಂನ ಭದ್ರತಾ ಸಿಬ್ಬಂದಿ ಅಜಿತ್‌ಕುಮಾರ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅವರ ಸಾವು ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಹಲವಾರು ರಾಜಕೀಯ ಪಕ್ಷಗಳು ರಾಜ್ಯ ಸರ್ಕಾರವನ್ನು ಟೀಕಿಸಿವೆ ಮತ್ತು ಉತ್ತರದಾಯಿತ್ವಕ್ಕೆ ಒತ್ತಾಯಿಸಿವೆ.