ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾದ ಶಿಕ್ಷಕ

ಗುರುವಾರ, 3 ಮಾರ್ಚ್ 2016 (17:02 IST)
ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿ ಪರಾರಿಯಾದ ಘಟನೆ ವರದಿಯಾಗಿದೆ.
 
ಕಳೆದ 16 ವರ್ಷಗಳಿಂದ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಮೋಹನ್ ರೈ ಬಗ್ಗೆ ಶಾಲೆಯ ಅಡಳಿತ ಮಂಡಳಿಗೆ ಯಾವುದೇ ರೀತಿಯ ದೂರುಗಳು ಬಂದಿರಲಿಲ್ಲ. ಆದರೆ, ಪ್ರಸಕ್ತ ವರ್ಷದ ಆರಂಭದಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳತಿಗೆ ಶಿಕ್ಷಕ ಮೋಹನ್ ರೈ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೆಡ್‌ಮಾಸ್ಟರ್ ಗಮನಕ್ಕೆ ತಂದಿದ್ದಾಳೆ. 
 
ಹೆಡ್‌ಮಾಸ್ಟರ್ ಕೂಡಲೇ ವಿದ್ಯಾರ್ಥಿನಿಯನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಶಿಕ್ಷಕ ಮೋಹನ್ ರೈ ನನ್ನ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಶಾಲಾ ಅವಧಿ ಮುಕ್ತಾಯಗೊಂಡ ನಂತರ ಹೊರಗಡೆ ಕರೆದುಕೊಂಡು ಹೋಗುತ್ತಿದ್ದ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. 
 
ಹೆಡ್‌ಮಾಸ್ಟರ್, ಶಿಕ್ಷಕ ಮೋಹನ್ ರೈ ನನ್ನು ಅಮಾನತ್ತುಗೊಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ರೈ, ನನ್ನ ಮೇಲೆ ಕ್ರಮ ಕೈಗೊಂಡಲ್ಲಿ ಗಂಬೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾನೆ. ಶಾಲಾ ಅಡಳಿತ ಮಂಡಳಿ ಆರೋಪಿ ಶಿಕ್ಷಕ ಮೋಹನ್ ರೈ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  
 
ಪೊಲೀಸ ಠಾಣೆಯಲ್ಲಿ ತನ್ನ ವಿರುದ್ಧ ಅತ್ಯಾಚಾರದ ದೂರು ದಾಖಲಾಗಿರುವುದು ತಿಳಿದ ಮೋಹನ್ ರೈ ಪರಾರಿಯಾಗಿದ್ದಾನೆ. ಆರೋಪಿ ನೆರೆಯ ರಾಜ್ಯವಾದ ಕೇರಳದಲ್ಲಿ ಅಡಗಿರಬಹುದು ಎಂದು ಶಂಕಿಸಿದ್ದಾರೆ.

ವೆಬ್ದುನಿಯಾವನ್ನು ಓದಿ