ಅಶ್ಲೀಲ ಚಿತ್ರಗಳನ್ನು ನೋಡುವಂತೆ ವಿದ್ಯಾರ್ಥಿನಿಯರಿಗೆ ಒತ್ತಡ ಹೇರಿದ ಶಿಕ್ಷಕ

ಸೋಮವಾರ, 13 ನವೆಂಬರ್ 2023 (09:30 IST)
ವಿದ್ಯಾರ್ಥಿನಿಯರಿಗೆ ಪತ್ರಿಕೆಗಳಲ್ಲಿ ಅತ್ಯಾಚಾರದ ಸುದ್ದಿಗಳನ್ನು ಓದುವಂತೆ ಪ್ರೇರೇಪಿಸುವುದು ಮತ್ತು ಅಶ್ಲೀಲ ಚಿತ್ರಗಳನ್ನು ನೋಡುವಂತೆ ಪ್ರಿನ್ಸಿಪಾಲ್ ಒತ್ತಡ ಹೇರುತ್ತಿದ್ದ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.
 
ಕಾಮಪಾಠ ಕಲಿಸ್ತಾ ಇದ್ದ ಪ್ರಿನ್ಸ್‌ಪಾಲ್ ವಿರುದ್ಧ ವಿದ್ಯಾರ್ಥಿನಿಯರು ತಿರುಗಿ ಬಿದ್ದ ಘಟನೆ ವರದಿಯಾಗಿದೆ.
 
ಆರೋಪಿ ಪ್ರಿನ್ಸಿಪಾಲ್ ವಿರುದ್ಧ ಹಿಂದೆಯೂ ದೂರು ದಾಖಲಾಗಿದ್ದರೂ ಶಿಕ್ಷಣ ಇಲಾಖೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಮತ್ತೆ ವಿದ್ಯಾರ್ಥಿನಿಯರು ದೂರು ನೀಡಿದ್ದರಿಂದ, ಘಟನೆಯ ಬಗ್ಗೆ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
 
ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುವುದಲ್ಲದೇ ಅಶ್ಲೀಲ ಕಥೆಗಳನ್ನು ಓದಲು ಸಲಹೆ ನೀಡುತ್ತಿದ್ದ ಎಂದು ಆಕ್ರೋಶಗೊಂಡ ವಿದ್ಯಾರ್ಥಿನಿಯರು ಪ್ರತಿಭಟನೆ ಆರಂಭಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ